ಮನವೆಂಬ ಮರ್ಕಟನು ತನುವೆಂಬ ವೃಕ್ಷವನೇರಿ
ಇಂದ್ರಿಯಗಳೆಂಬ ಶಾಖೆ ಶಾಖೆಗೆ ಹಾರಿ
ವಿಶಯಂಗಳೆಂಬ ಫಲಂಗಳ ಗ್ರಹಿಸಿ
ಭವದತ್ತ ಮುಖವಾಗಿ ಹೋಗುತಿದೆ ನೋಡ
ಮನವೆಂಬ ಮರ್ಕಟನ ನೆನಹೆಂಬ ಪಾಶದಿ ಕಟ್ಟಿ
ಮನವೆಂಬ ಮರ್ಕಟನ ನಿಮ್ಮ ನೆನಹೆಂಬ ಪಾಶದಿ ಕಟ್ಟಿ
ಎನ್ನನುಳಿಸಿಕೊಳ್ಳಯ್ಯ ಅಖಂಡೇಶ್ವರ
ಮನವೆಂಬ ಮರ್ಕಟನು ತನುವೆಂಬ ವೃಕ್ಷವನೇರಿ
ಇಂದ್ರಿಯಗಳೆಂಬ ಶಾಖೆ ಶಾಖೆಗೆ ಹಾರಿ
ವಿಶಯಂಗಳೆಂಬ ಫಲಂಗಳ ಗ್ರಹಿಸಿ
ಭವದತ್ತ ಮುಖವಾಗಿ ಹೋಗುತಿದೆ ನೋಡ
ಮನವೆಂಬ ಮರ್ಕಟನ ನೆನಹೆಂಬ ಪಾಶದಿ ಕಟ್ಟಿ
ಮನವೆಂಬ ಮರ್ಕಟನ ನಿಮ್ಮ ನೆನಹೆಂಬ ಪಾಶದಿ ಕಟ್ಟಿ
ಎನ್ನನುಳಿಸಿಕೊಳ್ಳಯ್ಯ ಅಖಂಡೇಶ್ವರ